ER NEWS

News Subject: 
ಮಳೆ ಅವಾಂತರ ನಿರ್ವಹಣೆಯಲ್ಲಿ ಸರಕಾರ ವಿಫಲ: ಜಗದೀಶ್ ಶೆಟ್ಟರ್
Upload Image: 
Body: 

ರಾಜ್ಯಾದ್ಯಂತ ಹಲವಾರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅತಿವೃಷ್ಠಿಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ರಾಜ್ಯ ಸರಕಾರ ಮಾತ್ರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ರವಿವಾರ ನಗರದಲ್ಲಿ ಶ್ರೀರಾಮುಲು ಅಭಿಮಾನಿ ಬಳಗ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳು ಮಳೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. ಸರಕಾರ ಕೂಡಲೆ ಮಳೆ ಹಾವಳಿಯಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ತುರ್ತು ಪರಿಹಾರ ಘೋಷಿಸಬೇಕು. ಅಲ್ಲದೆ, ರೈತರ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು.

Reach Count: 
1