ER NEWS

News Subject: 
ಮಂಡ್ಯ: ವೈದ್ಯರಿಲ್ಲದೇ ಸರ್ಕಾರಿ ಆಸ್ಪತ್ರೆ ಮುಂದೆ ಗಂಟೆಗಟ್ಟಲೇ ನರಳಾಡಿದ ಗರ್ಭಿಣಿ
Upload Image: 
Body: 

ವೈದ್ಯರಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ 22 ವರ್ಷದ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಗಂಟೆಗೂ ಹೆಚ್ಚು ಕಾಲ ನರಳಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಗರ್ಭಿಣಿ ಮಹಿಳೆಯರನ್ನು ಅವರ ಪೋಷಕರು ಬೆಳಗ್ಗೆ 7.30 ರ ವೇಳೆಗೆ ಆಸ್ಪತ್ರೆಗೆ ಕರೆ ತಂದಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಆಸ್ಪತ್ರೆ ಮುಚ್ಚಿದ್ದ ಕಾರಣ ಆಸ್ಪತ್ರೆಯ ಮುಂಭಾಗದಲ್ಲೇ ಗರ್ಭಿಣಿ ನರಳಾಡಿದ್ದಾರೆ.

ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್​ ನೀಡುವಂತೆ ಮನವಿ ಮಾಡಿದರೆ, ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್​ ಕೆಟ್ಟುಹೋಗಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ಥಳೀಯ ಮಾಧ್ಯಮಗಳು ಮಳವಳ್ಳಿ ತಾಲೂಕು ಆಸ್ಪತ್ರೆ ಸಂಪರ್ಕಿಸಿ ಅಲ್ಲಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ನಂತರ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Reach Count: 
1