Public News

News Subject: 
ಪ್ರಥಮ PU ವಿದ್ಯಾರ್ಥಿಗಳಿಗೆ ಶಾಕ್ : ಆನ್ ಲೈನ್ ನಲ್ಲಿ ಪರೀಕ್ಷೆ ಫಿಕ್ಸ್!
Upload Image: 
PublicNext--511533--node-nid
Category: 
Education
Government
Body: 

ಬೆಂಗಳೂರು : ಕೊರೊನಾದಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಆನ್ ಲೈನ್ ಮೂಲಕವೇ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ಕೊಟ್ಟಿದೆ. ಸದ್ಯ ಹಲವು ಪರೀಕ್ಷೆಗಳನ್ನು ರದ್ದು ಮಾಡಿರುವ ಸರ್ಕಾರ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಶಕ್ ಕೊಟ್ಟಿದೆ. ಹೌದು ನಮಗೂ ಎಲ್ಲರಂತೆ ಪರೀಕ್ಷೆ ಇಲ್ಲಾ ಎಂದುಕೊಂಡಿದ್ದ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿಯೇ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.
ಈ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು, ವಾಟ್ಸ್ ಆಯಪ್, ಇ-ಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಸಲ್ಲಿಸಬೇಕು. ಅದನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ ಲೋಡ್ ಮಾಡುವಂತೆ ಸೂಚಿಸಲಾಗಿದೆ.

Reach Count: 
34575