Public News

News Subject: 
ಮೋದಿಗೆ ಗಡ್ಡದ ಚಿಂತೆ, ಗ್ರಾಹಕರಿಗೆ ಬೆಲೆ ಬಿಸಿ, ಅದಾನಿ ಅಂಬಾನಿಗೆ ಬ್ಯುಸಿನೆಸ್ : ಲಕ್ಷ್ಮೀ ಲೇವಡಿ
Category: 
Politics
Body: 

ಬೆಳಗಾವಿ : ದೇಶದಲ್ಲಿ ಜನ ಕೋವಿಡ್ ಹೊಡೆತಕ್ಕೆ ತತ್ತರಿಸ ಹೋಗಿದ್ದಾರೆ. ಈ ಸಂಕಷ್ಟದ ಸಂದರ್ಭದಲ್ಲಿ ಜನತೆಗೆ ನೆರವಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಗಡ್ಡ ಬೆಳೆಸಿಕೊಳ್ಳುವುದರಲ್ಲಿ ಬ್ಯುಜಿಯಾಗಿದ್ದಾರೆಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದ್ದಾರೆ.
ಇನ್ನು ಸರಕಾರ ಕಚ್ಚಾತೈಲ ಬೆಲೆಯನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಬೆಳಗಾವಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಎಲ್ಲ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಬಿಜೆಪಿ ಸರಕಾರ ಬರುವ ಮುಂಚೆ ನರೇಂದ್ರ ಮೋದಿ ದೇಶದ ಜನರಿಗೆ ಅಚ್ಚೆ ದಿನ ನೀಡುವುದಾಗಿ ಘೋಷಣೆ ಮಾಡಿದ್ದರು. ದೇಶದಲ್ಲಿ ಕಳೆದ ಏಳು ವರ್ಷಗಳಿಂದ ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ನೂರು ರು.ಗೆ ಒಂದು ಲೀಟರ್ ಬಂದು ನಿಂತಿದೆ ಎಂದರೆ ಇದು ಮೋದಿಯ ಅಚ್ವೆ ದಿನ ಎಂದು ಲೇವಡಿ ಮಾಡಿದರು.

ದೇಶದಲ್ಲಿ ಕೋವಿಡ್ ನಿಂದ ಪಾರಾಗಲು ಜನರು ಹರಸಾಹಸ ಪಡುತ್ತಿದ್ದಾರೆ. ಸರಿಯಾದ ವ್ಯಾಕ್ಸಿನ್ ಸಿಗುತ್ತಿಲ್ಲ. ಎಲ್ಲರಿಗೂ ಉಚಿತವಾಗಿ ಕೋವಿಡ್ ಚಿಕಿತ್ಸೆ ನೀಡುವ ಬದಲು ಖಾಸಗಿ ಆಸ್ಪತ್ರೆಯವರು ಜನರ ಹಣವನ್ನು ಲೂಟಿ ಹೊಡೆಯುತ್ತಿದ್ದರೂ ಅದಕ್ಕೆ ಕಡಿವಾಣ ಹಾಕುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಇದರ ಮಧ್ಯ ಕಚ್ವಾ ತೈಲ ಬೆಲೆಯನ್ನು ಏರಿಕೆ ಮಾಡಿ ಸಾರ್ವಜನಿಕರ ಜೀವನದ ಮೇಲೆ ಹೊರೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ದೋರಣೆ ಮುಂದುವರೆದರೆ ದೇಶದ ಜನತೆ ಬಿಜೆಪಿ ಸರಕಾರಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಹರಿಹಾಯ್ದರು.

ಈ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ರಾಜೇಂದ್ರ ಪಾಟೀಲ, ಜಯಶ್ರೀ ಮಾಳಗಿ, ಆಯಿಷಾ ಸನದಿ, ಮೋಹನ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Reach Count: 
33880