Kshetra Samachara

Local News Subject: 
ಧಾರವಾಡ: ನಾವು ಮೋದಿ ವಿರುದ್ಧ ಧಿಕ್ಕಾರ ಕೂಗೇ ಕೂಗ್ತೀವಿ
City: 
Hubballi-Dharwad
Video Thumbnail: 
PublicNext-473197-511730-Hubballi-Dharwad-Politics-Law-and-Order-node
Category: 
Politics
Law and Order
Body: 

ಧಾರವಾಡ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಧಾರವಾಡದ ನರೇಗಲ್ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಇಮ್ರಾನ್ ಕಳ್ಳಿಮನಿ ಹಾಗೂ ಪೊಲೀಸರ ನಡುವೆ ಜಟಾಪಟಿ ನಡೆದಿದೆ.

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇಮ್ರಾನ್ ಕಳ್ಳಿಮನಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರಕ್ಕೂ ಹಾಗೂ ಪ್ರಧಾನಿ ನರೇಂದ್ರ ಮೋದಿಗೂ ಧಿಕ್ಕಾರ ಕೂಗಲಾರಂಭಿಸಿದರು.

ಇದಕ್ಕೆ ಮಧ್ಯೆ ಪ್ರವೇಶಿಸಿದ ಪೊಲೀಸರು, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಇದೆ. ಘೋಷಣೆಗಳನ್ನು ಹಾಕುವಂತಿಲ್ಲ. ಮೌನ ಪ್ರತಿಭಟನೆ ಮಾಡಿ ಆದರೆ, ಘೋಷಣೆ ಹಾಕಬೇಡಿ ಎಂದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಇಮ್ರಾನ್, ಘೋಷಣೆ ಏಕೆ ಕೂಗಬಾರದು. ನಾವು ಮೋದಿ ವಿರುದ್ಧ ಘೋಷಣೆ ಕೂಗೇ ಕೂಗುತ್ತೇವೆ. ಅವರು ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು.

ನಂತರ ಉಳಿದ ಪ್ರತಿಭಟನಾಕಾರರೇ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Reach Count: 
39793