Kshetra Samachara

Local News Subject: 
ಅಷ್ಟ ಮಠಾಧೀಶರಿಂದ ಕೊಡಮಾಡಿದ ಆಂಬುಲೆನ್ಸ್ ಜಿಲ್ಲಾಡಳಿತಕ್ಕೆ ಹಸ್ತಾಂತರ
City: 
Udupi
Video Thumbnail: 
PublicNext-473273-511865-Udupi-Politics-News-COVID-node
Category: 
Politics
News
COVID
Body: 

ಉಡುಪಿ:ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕಾರಿಯಾಗಲು ಆಂಬುಲೆನ್ಸ್ ನೀಡುವಂತೆ ಶ್ರೀಕೃಷ್ಣ ಮಠದ ಅಷ್ಟ ಮಠಾಧೀಶರಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಮನವಿ ಮಾಡಿರುವಂತೆ ಇಂದು ಶ್ರೀಕೃಷ್ಣ ಮಠದಲ್ಲಿ ಶಾಸಕರ ಸಮ್ಮುಖದಲ್ಲಿ ಅಷ್ಟ ಮಠಾಧೀಶರುಗಳು ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ಇವರಿಗೆ ರೂ. 20.00 ಲಕ್ಷ ಮೌಲ್ಯದ ಆಂಬುಲೆನ್ಸ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು, ಶ್ರೀ ವಿದ್ಯಾರಾಜೇಶ್ವರ ತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥರು, ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾll ನಾಗಭೂಷಣ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾll ಮಧುಸೂದನ್ ನಾಯಕ್, ಕೋವಿಡ್ ನೋಡಲ್ ಅಧಿಕಾರಿಗಳಾದ ಡಾll ಪ್ರಶಾಂತ್ ಭಟ್, ವೈದ್ಯಾಧಿಕಾರಿಗಳಾದ ಡಾll ಪ್ರೇಮಾನಂದ್, ಡಾll. ಚಂದ್ರಶೇಖರ್ ಅಡಿಗ ಉಪಸ್ಥಿತರಿದ್ದರು.

Reach Count: 
3530