Public News

News Subject: 
ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹೋರಾಡಿದ್ದು ಯಾವ ಉದ್ದೇಶಕ್ಕಾಗಿ?: ಕುಮಾರಸ್ವಾಮಿ ಪ್ರಶ್ನೆ
Upload Image: 
PublicNext--514336--node-nid
Category: 
Politics
Body: 

ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಹೋರಾಡುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ ಜಿಎಸ್ ಟಿ ಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. ಜಿಎಸ್ ಟಿಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ ಎಂದಿದ್ದಾರೆ.

Reach Count: 
45750