Public News

News Subject: 
ಸಂಚಾರಿ ವಿಜಯ್ ಸ್ಥಿತಿ ಗಂಭೀರ : ಚಿಕಿತ್ಸೆ ವೆಚ್ಚ ಭರಿಸುವುದಾಗಿ ಡಿಸಿಎಂ ಭರವಸೆ
Upload Image: 
PublicNext--514590--node-nid
Category: 
Politics
Cinema
Accident
Body: 

ಬೆಂಗಳೂರು: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡದ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ನಟನ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.

ಸದ್ಯ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ನ್ಯೂರೋ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಉಸಿರಾಟವನ್ನೂ ನಿಲ್ಲಿಸಿದ್ದಾರೆ, ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಸಂಪೂರ್ಣವಾಗಿ ಜೀವ ರಕ್ಷಕದ ನೆರವಿನಲ್ಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಈ ಮಧ್ಯೆ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ತಮ್ಮ ಫೌಂಡೇಶನ್ ಮೂಲಕವೇ ಭರಿಸಲಾಗುವುದು, ಅವರ ಕುಟುಂಬಸ್ಥರು ಹಣ ನೀಡುವುದು ಬೇಡ ಎಂದು ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಗಳ ಸಹಾಯಕ್ಕೆ ಸಂಚಾರಿ ವಿಜಯ್ ಕುಟುಂಬಸ್ಥರು ಧನ್ಯವಾದ ಹೇಳಿದ್ದಾರೆ.

Reach Count: 
61607