Kshetra Samachara

Local News Subject: 
ಕಾಂಗ್ರೆಸ್ 100 ನಾಟೌಟ್ ಅಭಿಯಾನ: ಬೆಲೆ ಏರಿಕೆಯಿಂದ ಬಿಜೆಪಿ ಸರ್ಕಾರ ಜನರಿಗೆ ಸಮಸ್ಯೆ ತಂದಿದೆ
City: 
Hubballi-Dharwad
Category: 
Politics
Body: 

ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಆದೇಶದ ಮೇರೆಗೆ 100-ನಾಟೌಟ್ ಅಭಿಯಾನದ ಹುಬ್ಬಳ್ಳಿ-ಧಾರವಾಡ ಉಸ್ತುವಾರಿಗಳಾದ ಆರ್.ವಿ.ದೇಶಪಾಂಡೆ ಅವರ ನೇತೃತ್ವದಲ್ಲಿಂದು ನವನಗರದ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಧಾರವಾಡ ಪಶ್ಚಿಮ-74 ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನವನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದೊಂದಿಗೆ ವಾರ್ಡ ನಂ 29 ರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕೋವಿಡ್-19 ನಿಯಮಾವಳಿಗಳ ಪ್ರಕಾರ 100-ನಾಟೌಟ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಾಯಿತು

Reach Count: 
23171