Public News

News Subject: 
ಕೇಂದ್ರ ಸರ್ಕಾರದ ಮೇಲೆ ಮತ್ತೆ ಗುಡುಗಿದ ರಾಹುಲ್ ಗಾಂಧಿ
Upload Image: 
PublicNext--514778--node-nid
Category: 
Politics
Body: 

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವುದು ಮುಂದುವರೆದಿದೆ. ಟ್ವಿಟರ್​ನಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದಿರುವ ಅವರು, ಕೇಂದ್ರ ಸರ್ಕಾರ ಸುಳ್ಳು ಮತ್ತು ಖಾಲಿ ಘೋಷಣೆಗಳನ್ನು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಸರ್ಕಾರದಲ್ಲಿ ಸುಳ್ಳು ಮತ್ತು ಖಾಲಿ ಘೋಷಣೆ ಹೊರಡಿಸುವ ರಹಸ್ಯ ಇಲಾಖೆ ದಕ್ಷವಾಗಿದೆ ಎಂದು ಅವರು ಟೀಕಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಈಗಾಗಲೇ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಲಸಿಕೆ ಕೊರತೆ, ಜಿಎಸ್​ಟಿ ಮತ್ತು ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮುಂತಾದ ವಿಚಾರಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

Reach Count: 
27758