Kshetra Samachara

Local News Subject: 
ಮಂಗಳೂರು: ನಿರಂತರ ವರ್ಷಧಾರೆ; ರಸ್ತೆ ಜಲಾವೃತ, ನದಿ ನೀರಿನ ಮಟ್ಟ ಏರಿಕೆ
City: 
Udupi
Mangalore
Video Thumbnail: 
PublicNext--514868--node-nid
Category: 
Nature
Body: 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಬೆಳಗ್ಗಿನಿಂದಲೇ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕೂಡ ನಿರಂತರ ಮಳೆ ಪರಿಣಾಮ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ನಗರದ ಅಲ್ಲಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಲಾಗದೆ ರಸ್ತೆ ತುಂಬಿಕೊಂಡಿದೆ.

ಕೊಡಿಯಾಲ್ ಬೈಲ್, ಅಳಕೆ ಸುತ್ತಮುತ್ತ ಮತ್ತು ಪಡೀಲ್, ತೊಕ್ಕೊಟ್ಟು, ಪಂಪ್‌ವೆಲ್ ಮೇಲ್ಸೇತುವೆ ತಳದಲ್ಲಿ ನೀರು ನಿಂತು ಕೆರೆಯಂತಾಗಿದೆ. ಜೂನ್ 16ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ 115ರಿಂದ 204 ಮಿ.ಮೀ. ವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ. ಜೂನ್ 16ರ ಬಳಿಕ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Reach Count: 
6942