Public News

News Subject: 
ಆಗ್ರಾದಲ್ಲಿ ಪವಾಡ: ಸತತ 9 ಗಂಟೆ ಕಾರ್ಯಾಚರಣೆ ಬಳಿಕ 4 ವರ್ಷದ ಬಾಲಕನ ರಕ್ಷಣೆ
Video Thumbnail: 
PublicNext--514982--node-nid
Category: 
Human Stories
Body: 

ಲಕ್ನೋ: ಆಗ್ರಾದ ಧರಿಯೈ ಗ್ರಾಮದಲ್ಲಿ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ಬಾಲಕನನ್ನು ಸತತ 9 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ.

ಫತೇಹಾಬಾದ್‌ನ ನಿಬೋಹರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ (ಇಂದು) ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. 4 ವರ್ಷದ ಬಾಲಕ ಸೋಮವಾರ ಬೆಳಿಗ್ಗೆ ಆಟವಾಡುತ್ತಾ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ಆರ್ಮಿ ತಂಡವು ರಕ್ಷಣಾ ಕಾರ್ಯ ಆರಂಭಿಸಿತ್ತು. ಸತತ 9 ಗಂಟೆ ಕಾರ್ಯಾಚರಣೆ ಬಳಿಕ ಬಾಲಕನನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ರಕ್ಷಣಾ ಕಾರ್ಯವನ್ನು ಅನೇಕರು ಪವಾಡವೇ ಸರಿ ಎಂದು ಹೇಳಿದ್ದಾರೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ಆರ್ಮಿ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Reach Count: 
73579