Public News
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 6,835 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 120 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 15,409 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 25,66,774ಕ್ಕೆ ಏರಿಕೆಯಾಗಿದೆ. ಇನ್ನು 1,72,141 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೂ 27,71,969 ಜನರಿಗೆ ಸೋಂಕು ತಗುಲಿದ್ದು, 33,033 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ ಕೊರೊನಾ ಹರಡುವಿಕೆಯ ಪಾಸಿಟಿವಿಟಿ ದರ 4.56%ಕ್ಕೆ ಇಳಿಕೆಯಾಗಿದೆ. ಇನ್ನು ಮರಣ ಪ್ರಮಾಣ 1.75%ಕ್ಕೆ ಇಳಿಕೆಯಾಗಿದೆ. ರಾಜ್ಯಾದ್ಯಂತ 1,49,742 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 1,470 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,98,158ಕ್ಕೆ ಏರಿಕೆಯಾಗಿದೆ. 2,409 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 10,97,794ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 12 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,319 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 85,044 ಸಕ್ರಿಯ ಪ್ರಕರಣಗಳಿವೆ.