Public News

News Subject: 
40 ಸಾವಿರ ಕೋಟಿ ಸಾಲವಿದ್ದರೂ ಅಧಿಕಾರಿಗಳಿಗೆ ಐಷಾರಾಮಿ- ಸರ್ಕಾರದ ವಿರುದ್ಧ ವಿಪಕ್ಷಗಳು ಕಿಡಿ
Upload Image: 
PublicNext--515161--node-nid
Category: 
Politics
Body: 

ಹೈದರಾಬಾದ್​: ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತೆಲಂಗಾಣದಲ್ಲಿ ಮೂವತ್ತೆರಡು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದ್ದು, ಅವರಿಗೆ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಐಷಾರಾಮಿ ಕಿಯಾ ಕಾರ್ನಿವಲ್ ಕಾರುಗಳನ್ನು ಖರೀದಿಸಿದ್ದಾರೆ.

ಈ ಪ್ರತಿಯೊಂದು ಕಾರಿಗೆ 25ರಿಂದ 30 ಲಕ್ಷ ವೆಚ್ಚವಾಗಿದೆ. ಕೋವಿಡ್ ವಿರುದ್ಧ ಹೋರಾಡಲು ರಾಜ್ಯವು ಸುಮಾರು 40 ಸಾವಿರ ಕೋಟಿ ರೂ. ಸಾಲಕ್ಕೆ ತುತ್ತಾಗಿದ್ದು, ಈ ಸಮಯದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಪ್ರತಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಹೈದರಾಬಾದ್‌ನಲ್ಲಿರುವ ಮುಖ್ಯಮಂತ್ರಿಯವರ ನಿವಾಸವಾದ ಪ್ರಗತಿ ಭವನದಲ್ಲಿ, ತೆಲಂಗಾಣ ಸಾರಿಗೆ ಸಚಿವ ಪುವ್ವಾಡ ಅಜಯ್ ಕುಮಾರ್ ಕಾರುಗಳಿಗೆ ಹಸಿರು ನಿಶಾನೆ ನೀಡಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕಾರುಗಳನ್ನು ಈ ಹಿಂದೆಯೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ವಾಹನಗಳನ್ನು ಪರಿಶೀಲಿಸಿದ್ದರು ಎನ್ನಲಾಗಿದೆ.

Reach Count: 
32405