Public News

News Subject: 
ಬ್ರೇಕಿಂಗ್: ಜೂ.21ರಿಂದ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆ
Upload Image: 
PublicNext--515222--node-nid
Category: 
Education
Government
Body: 

ಬೆಂಗಳೂರು: ರಾಜ್ಯದಲ್ಲಿ ಜೂನ್‌ 21ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.‌

ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗೆ ಲಸಿಕೆ ಹಾಕಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ಆರೋಗ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ 21ರಿಂದ ಜುಲೈ 5 ರವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಕೋವಿಡ್-19 ಎರಡನೇ ಅಲೆಯು ವ್ಯಾಪಿಸಿರುವ ಕಾರಣದಿಂದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದರಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ 2 ದಿನಗಳಿಗೆ ಸೀಮಿತಗೊಳಿಸಿ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Reach Count: 
56268