Public News

News Subject: 
ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ- ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Upload Image: 
PublicNext--515247--node-nid
Category: 
Nature
Body: 

ಬೆಂಗಳೂರು: ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಕೆಲವೆಡೆ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆ ಕೊಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ರೆಡ್, ಆರೇಂಜ್ ಹಾಗೂ ಯೆಲ್ಲೋ​ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿವಿಧ ದಿನಗಳಲ್ಲಿ, ಹಲವು ಪ್ರದೇಶಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿ, ಜಾರ್ಖಂಡ್‌ನಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಹಾಗೂ ಪೂರ್ವ ಅರಬ್ಬಿ ಸಮುದ್ರದಲ್ಲಿ ಮತ್ತೊಂದು ಟ್ರಫ್ ಕರ್ನಾಟಕದ ಕರಾವಳಿ ಪ್ರದೇಶ ಸಮೀಪಿಸತ್ತಾ ಇರೋದರಿಂದ ಮಳೆಯಾಗುತ್ತಿದೆ. ಇದರ ಪರಿಣಾಮ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ 18ರವರೆಗೆ ವ್ಯಾಪಕ ಮಳೆಯಾಗಲಿದೆ.

Reach Count: 
44853