Public News

News Subject: 
ಗಾಂಜಾ ದಂಧೆ: ಪ್ರತ್ಯೇಕ ಪ್ರಕರಣಗಳಲ್ಲಿ 8 ಮಂದಿ ಬಂಧನ, 10 ಕೆ.ಜಿ. ಗಾಂಜಾ ವಶ
Upload Image: 
Body: 

ರಾಜ್ಯದಲ್ಲಿ ಗಾಂಜಾ ಮಾರಾಟಕ್ಕೆ ಕಠಿಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಪ್ರತ್ಯೇಕ ಪ್ರಕರಣಗಳಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಬ್ರಹ್ಮಣ್ಯಪುರ ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿಗಳಿಂದ 2,230 ಗ್ರಾಂ ಗಾಂಜಾ, ಮೊಬೈಲ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ. ಇಲಿಯಾಸ್ ಪಾಷಾ, ಫೈಜಲ್ ಖಾನ್​, ಕಬೀರ್​ ಪಾಷಾ ಮತ್ತು ಇರ್ಫಾನ್ ಪಾಷಾನನ್ನು ಬಂಧಿತರು. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಆರೋಪಿಗಳಿಂದ ಬರೋಬ್ಬರಿ 8 ಕೆ.ಜಿ. 600 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದು, ಬೊಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜನಾರ್ಧನ್​, ಚೇತನ್ ಶರ್ಮಾ, ಬಿಸಂಬರ್ ಮಂಡಲ, ಧನೇಶ್ವರ್ ಬೆಹಾರ್ ಬಂಧಿತ ಆರೋಪಿಗಳು

Reach Count: 
1