Kshetra Samachara

Local News Subject: 
ಧಾರವಾಡ: ಹತ್ತು ಸಾವಿರ ವಿದ್ಯಾರ್ಥಿಗಳಿಂದ ಹುತಾತ್ಮ ಯೋಧರಿಗೆ ಏಕಕಾಲಕ್ಕೆ ಶ್ರದ್ಧಾಂಜಲಿ ಸಲ್ಲಿಕೆ
City: 
Hubballi-Dharwad
Category: 
Others
Body: 

ಧಾರವಾಡ: ನಿನ್ನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ನಗರದೆಲ್ಲೆಡೆ ಪ್ರತಿಭಟನೆಗಳು ನಡೆದಿವೆ. ಹಾಗೂ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿಗಳು ಕೂಡ ಸಲ್ಲಿಕೆಯಾಗುತ್ತಿವೆ.
ನಗರದ ಜೆಎಸ್‍ಎಸ್ ಶಿಕ್ಷಣ ಸಂಸ್ಥೆ ಕೂಡ ವಿಭಿನ್ನ ರೀತಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ತನ್ನ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಮೈದಾನದಲ್ಲಿ ಸೇರಿಸಿ ಸುಮಾರು 10 ಸಾವಿರ ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಗಮನಸೆಳೆಯಿತು.

Reach Count: 
15