Public News

News Subject: 
'ಲೋಕ'ಸಮರ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್; ಎನ್‌ಡಿಎ ಒಕ್ಕೂಟ ಸೇರಿದ ಎಐಎಡಿಎಂಕೆ
Upload Image: 
Category: 
Politics
Body: 

ತಮಿಳುನಾಡಿನಲ್ಲಿ ಬಿಜೆಪಿ - ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವ ನಿರ್ಧಾರ ಮಾಡಿವೆ. ಈ ಮೂಲಕ ಹಲವು ತಿಂಗಳುಗಳಿಂದ ಕೇಳಿಬರುತ್ತಿದ್ದ ಊಹಾಪೋಹಗಳು ನಿಜವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನ 5 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು, ತಮಿಳುನಾಡು ಹಾಗೂ ಪುದುಚೆರ್ರಿಯಲ್ಲಿ ಇಬ್ಬರೂ ಒಟ್ಟಾಗಿ ಸ್ಪರ್ಧೆ ಮಾಡಲಿದ್ದೇವೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕ ಪನ್ನೀರ್‌ ಸೆಲ್ವಂ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇನ್ನು, ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಸಹ ಮೈತ್ರಿ ಕುರಿತು ಮಾತನಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳಲಿದೆ. ಇದು ಮೆಗಾ ಹಾಗೂ ಗೆಲ್ಲುವ ಮೈತ್ರಿಕೂಟ ಎಂದು ಹೇಳಿದ್ದಾರೆ.

ಅಲ್ಲದೆ, ತಮಿಳುನಾಡಿನಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಕ್ಕೆ ನಮ್ಮ ಬೆಂಬಲ ನೀಡಲಿದ್ದೇವೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಮಾಹಿತಿ ನೀಡಿದ್ದಾರೆ. 21 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈ ಎಲ್ಲ ಕ್ಷೇತ್ರಗಳಲ್ಲಿ ಎಐಎಡಿಎಂಕೆಯನ್ನು ಬಿಜೆಪಿ ಬೆಂಬಲಿಸಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ತಮಿಳುನಾಡಿನ ಚೆನ್ನೈನಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿ ಕುರಿತು ಮಾತುಕತೆ ನಡೆದಿದ್ದು, ಮಾತುಕತೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಎರಡೂ ಪಕ್ಷಗಳ ನಾಯಕರು ಮಾಹಿತಿ ನೀಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಐಎಡಿಎಂಕೆ ಅಧಿಕೃತವಾಗಿ ಎನ್‌ಡಿಎಗೆ ಸೇರ್ಪಡೆಯಾಗಿದೆ. ಇನ್ನು, ಸುದ್ದಿಗೋಷ್ಠಿಯಲ್ಲಿ ತಮಿಳುನಾಡು ಸಿಎಂ ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ. ಪನ್ನೀರಸೆಲ್ವಂ ಹಾಗೂ ಕೇಂದ್ರ ಸಚಿವ ಪಿಯೂಶ್‌ ಗೋಯಲ್ ಭಾಗಿಯಾಗಿದ್ದರು.

Reach Count: 
1