Kshetra Samachara

Local News Subject: 
ನರೇಗಲ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ
City: 
Hubballi-Dharwad
Category: 
Politics
Body: 

ಧಾರವಾಡ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡ ಪಿ.ಎಚ್.ನೀರಲಕೇರಿ ನೇತೃತ್ವದಲ್ಲಿ ಧಾರವಾಡದ ನರೇಗಲ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.

ಕೇವಲ ನಾಲ್ಕು ಜನ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಿದರು.

ಪೆಟ್ರೋಲ್ ಬೆಲೆ 100 ರ ಗಂಡಿಗೆ ಬಂದು ನಿಂತಿದೆ. ಕೇಂದ್ರ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಲಾಕ್‌ಡೌನ್‌ ಮಧ್ಯೆ ಈ ರೀತಿ ತೈಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರನ್ನು ಕಷ್ಟದ ಕೂಪಕ್ಕೆ ಕೇಂದ್ರ ಸರ್ಕಾರ ತಳ್ಳುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

ಕೂಡಲೇ ತೈಲ ಬೆಲೆ ಇಳಿಕೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರ ನೆರವಿಗೆ ಬರಬೇಕು. ಅಚ್ಛೆ ದಿನ ಎಂದು ಹೇಳಿ ಮೋದಿ ಅಧಿಕಾರಕ್ಕೆ ಬಂದ ನಂತರ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟುತ್ತಲೇ ಇದೆ. ಇದೇನಾ ಅಚ್ಛೆ ದಿನ ಎಂದು ಕಾರ್ಯಕರ್ತರು ಪ್ರಶ್ನಿಸಿದರು.

Reach Count: 
26411