Kshetra Samachara

Local News Subject: 
ಆಸ್ಪತ್ರೆ ಸಿಬ್ಬಂದಿಗಳಿಗೆ ವೇತನ ಬಾಕಿ: ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸಭೆ
City: 
Udupi
Mangalore
Upload Image: 
PublicNext-473172-511674-Udupi-Mangalore-Politics-node
Category: 
Politics
Body: 

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ವೇತನ ಪಾವತಿಸದೇ ಇರುವ ಬಗ್ಗೆ ಹಾಗೂ ಇತರ ಸಮಸ್ಯೆಗಳ ಕುರಿತು ಇಂದು ಸಂಬಂಧಿಸಿದಪಟ್ಟ ಅಧಿಕಾರಿಗಳೊಂದಿಗೆ ಶಾಸಕ ಕೆ. ರಘುಪತಿ ಭಟ್ ರವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್ ಅವರು ಈ ಆಸ್ಪತ್ರೆಯನ್ನು ನಿಯಮಬಾಹಿರವಾಗಿ ಖಾಸಗಿಯವರಿಗೆ ನೀಡಿದ್ದು ಇಂದು ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಆದ್ದರಿಂದ ಮುಖ್ಯಮಂತ್ರಿಯವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಲ್ಲಿ ಚರ್ಚಿಸಿ ಎಲ್ಲಾ ಸಮಸ್ಯೆಗಳ ಬಗ್ಗೆ ಸರಕಾರಿ ಮಟ್ಟದಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಮತ್ತು ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Reach Count: 
5182