Public News

News Subject: 
ಇಂದು ಮೋದಿ ಯೋಗಿ ಭೇಟಿ : ಬರುವ ವರ್ಷ ಯು.ಪಿಯಲ್ಲಿ ಎಲೆಕ್ಷನ್
Upload Image: 
PublicNext--511746--node-nid
Category: 
Politics
Body: 

ನವದೆಹಲಿ: ಕೊರೊನಾ ಅತಿ ಹೆಚ್ಚು ಬಾಧಿಸಿದ ಪ್ರದೇಶದಲ್ಲಿ ಉತ್ತರ ಪ್ರದೇಶ ಕೂಡ ಒಂದು. ಇದೇ ವೇಳೆ ಜನಸಾಮಾನ್ಯರಿಗೆ ಸರ್ಕಾರದ ಕಾರ್ಯವೈಖರಿ ಮೇಲೆ ಅಸಮಾಧಾನ ಕೂಡಾ ಹೆಚ್ಚಾಗಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರೆ, ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯ ಮಾತುಗಳು ಕೇಳಿಬರುತ್ತಿರುವುದರ ಮಧ್ಯೆ ಇಂದಿನ ಯೋಗಿ ಆದಿತ್ಯನಾಥ್-ಪ್ರಧಾನಿ ಮೋದಿಯವರ ಭೇಟಿ ಮಹತ್ವ ಪಡೆದಿದೆ. ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯುತ್ತಿದೆ, ಈ ಸಮಯದಲ್ಲಿ ಬಿಜೆಪಿ ಯಾವ ರೀತಿ ಸಿದ್ದತೆ ಮಾಡಿಕೊಳ್ಳುತ್ತಿದೆ ಎಂದು ಮೋದಿಯವರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟ ಪುನಾರಚನೆ ವಿಷಯ ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಇತ್ತೀಚೆಗೆ ಹೇಳಿದ್ದರು. ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುನ್ನ ಉನ್ನತ ನಾಯಕರು ರಾಜ್ಯದಲ್ಲಿ ಕೆಲವು ಬದಲಾವಣೆಗಳನ್ನು ಬಯಸುತ್ತಿದ್ದಾರೆ ಎಂಬ ಮಾತುಗಳಿವೆ. ಪ್ರಧಾನಿ ಕಚೇರಿಯ ಮಾಜಿ ಅಧಿಕಾರಿ ಮತ್ತು ವಿಧಾನ ಪರಿಷತ್ ಸದಸ್ಯ ಎ ಕೆ ಶರ್ಮ ಅವರು ರಾಜ್ಯ ಸಚಿವ ಸಂಪುಟದಲ್ಲಿ ಪ್ರಮುಖ ಹುದ್ದೆ ಸಿಗುವ ನಿರೀಕ್ಷೆಯಲ್ಲಿದ್ದಾರೆ.

Reach Count: 
22566