Kshetra Samachara

Local News Subject: 
ಉಡುಪಿ ಜಿಲ್ಲೆಯಲ್ಲಿ“ವೈದ್ಯರ ನಡೆ ಹಳ್ಳಿ ಕಡೆ “ ಕಾರ್ಯಕ್ರಮ
City: 
Udupi
Upload Image: 
PublicNext-473242-511807-Udupi-COVID-node
Category: 
COVID
Body: 

ಉಡುಪಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ಸರಕಾರ ತಂದಿರುವ “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸಲಾಗುತ್ತಿದೆ.ಇದರಿಂದಾಗಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಹಕಾರಿಯಾಗಿದೆ.

ಜಿಲ್ಲೆಯಲ್ಲಿ “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮದಡಿ ವೈದ್ಯರು, ಸ್ವಾಬ್ ಸಂಗ್ರಹಗಾರರು, ಗ್ರಾಮೀಣ ಕೋವಿಡ್ ಕಾರ್ಯಪಡೆಯ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ 73 ತಂಡಗಳನ್ನು ರಚಿಸಲಾಗಿದೆ.ತಂಡದ ಎಲ್ಲ ಸದಸ್ಯರು ಒಟ್ಟಾಗಿ ಗ್ರಾಮಗಳಿಗೆ ತೆರಳಲು ಅನುಕೂಲವಾಗುವಂತೆ, ಎಲ್ಲ ತಂಡಗಳಿಗೆ ಜಿಲ್ಲಾಡಳಿತದ ಮೂಲಕ ಪ್ರತ್ಯೇಕ ವಾಹನ ವ್ಯವಸ್ಥೆ ಒದಗಿಸಲಾಗಿದೆ.

ರೋಗ ಲಕ್ಷಣಗಳಿರುವವರನ್ನು ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸಲು ಕಿಟ್ ಗಳನ್ನು ಒದಗಿಸಿದ್ದು, ಪರೀಕ್ಷೆ ಮೂಲಕ ಸ್ಥಳದಲ್ಲೇ ಸೋಂಕಿತರನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ.ಸದ್ಯ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿರುವುದು ಗಮನಾರ್ಹ ಸಂಗತಿ.

Reach Count: 
2224