Public News

News Subject: 
ಕಾಂಗ್ರೆಸ್ ನಲ್ಲಿ ಇನ್ನೂ ಸಾಕಷ್ಟು ಬದಲಾವಣೆಗಳಾಗಬೇಕು: ಕಪಿಲ್‌ ಸಿಬಲ್
Upload Image: 
PublicNext--514709--node-nid
Category: 
Politics
Body: 

ಬೆಂಗಳೂರು: ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ ಪಕ್ಷದ ಹೈಕಮಾಂಡ್‌ ವಿರುದ್ಧ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಎಲ್ಲಾ ಸಂಘಟನೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಲೇ ಬೇಕಾದ ಅಗತ್ಯವಿದೆ. ಕಾಂಗ್ರೆಸ್‌ ಒಂದು ನಿಷ್ಕ್ರಿಯ ಪಕ್ಷವಾಗಿ ಇರದೇ ಬಿಜೆಪಿಗೆ ಪರ್ಯಾಯವಾಗಿ ಗುರುತಿಸಿಕೊಳ್ಳುವ ಅಗತ್ಯವಿದೆ ಎಂದು ಕಪಿಲ್‌ ಸಿಬಲ್‌ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ಪ್ರಸ್ತುತ ಬಿಜೆಪಿ ವಿರುದ್ಧ ಪ್ರಬಲ ರಾಜಕೀಯ ಪರ್ಯಾಯ ಇಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಆಳುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ದೇಶದ ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಕಾಂಗ್ರೆಸ್‌ ಗುರುತಿಸಿಕೊಳ್ಳಬಹುದಾಗಿದೆ ಎಂದಿದ್ದಾರೆ.

Reach Count: 
25730