Public News

News Subject: 
ಚಿತ್ರದುರ್ಗ: ಬಿಜೆಪಿ ಪಕ್ಷ ದಲಿತರನ್ನು ರಾಷ್ಟ್ರಪತಿ ಮಾಡಿದ್ದೇವೆ ಸಿದ್ದುಗೆ ಕಟೀಲ್ ತಿರುಗೇಟು
Category: 
Politics
Body: 

ಚಿತ್ರದುರ್ಗ: ಭಾರತೀಯ ಜನತಾ ಪಾರ್ಟಿ ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಅವರಿಗೆ ಸ್ಥಾನ ಮಾನ ಕಲ್ಪಿಸಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

"ತಾಕತ್ತಿದ್ದರೆ ದಲಿತ ಸಿಎಂ ಮಾಡಲಿ ಎಂದ ಸಿದ್ಧರಾಮಯ್ಯಗೆ ಹೇಳಿಕೆಗೆ" ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂಬೇಡ್ಕರ್ ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್ ಪಕ್ಷ, ಮೊದಲ ಸಚಿವ ಸಂಪುಟದಲ್ಲಿ ನೋವಾಗಿ ಅಂಬೇಡ್ಕರ್ ರಾಜೀನಾಮೆ ನೀಡಿದ್ದರು ಎಂದು ಕಟೀಲ್ ಹೇಳಿದರು.

ಲೋಕಸಭೆ ಚುನಾವಣೆಗೆ ನಿಂತಾಗ ಅಂಬೇಡ್ಕರ್ ಸೋಲಿಸಿದರು. ನಂತರ 2ನೇ ಬಾರಿ ಅವರ ಸಹಾಯಕನನ್ನು ಚುನಾವಣೆಗೆ ಎದುರು‌ ನಿಲ್ಲಿಸಿ ಸೋಲಿಸಿದರು. ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅಂತ್ಯ ಸಂಸ್ಕಾರಕ್ಕೂ ಜಾಗ ಕೊಡಲಿಲ್ಲ, ಭಾರತರತ್ನವೂ ಕೊಡಲಿಲ್ಲ, ಅಂಬೇಡ್ಕರ್ ಗೆ ಭಾರತ ರತ್ನ ಕೊಟ್ಟಿದ್ದು ನಾವು ಎಂದು ಹೇಳಿದರು. ಕಾಂಗ್ರೆಸ್ ಪಕ್ಷದವರು ಜಗಜೀವನ್ ರಾಮ್ ರನ್ನು ಪ್ರಧಾನಿ ಮಾಡಲಿಲ್ಲ ಎಂದು ಆರೋಪಿಸಿದರು.

ಸಿದ್ಧರಾಮಣ್ಣನ ಬಗ್ಗೆ ಇತಿಹಾಸ ಹೇಳಬೇಕೆಂದರೆ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದು ಮುಖ್ಯಮಂತ್ರಿ ಆದವರು. ಡಾ. ಜಿ. ಪರಮೇಶ್ವರ್ ಗೆ ಡಿಸಿಎಂ ಮಾಡಲಿಲ್ಲ, ಆದರೆ ಚುನಾವಣೆಯಲ್ಲಿ ಸೋಲಿಸಿದರು. ಇನ್ನು ಮಲ್ಲಿಕಾರ್ಜುನ ಖರ್ಗೆ, ಚಂದ್ರಪ್ಪ, ದೃವನಾರಾಯಣ, ಸೇರಿ ದಲಿತ ಮುಖಂಡರನ್ನು ಸೋಲಿಸಿದ್ದಾರೆ. ಈವತ್ತಿಗೂ ಖರ್ಗೆ, ಪರಮೇಶ್ವರ್ ಮುಂದಕ್ಕೆ ಬರಲು ಬಿಡಲ್ಲ ಎಂದರು. ಬಿಜೆಪಿ ಪಕ್ಷ ಕಡಿಮೆ ಸಮಯ ಅಧಿಕಾರ ನಡೆಸಿದೆ.ಮುಸ್ಲಿಂ ಅಬ್ದುಲ್ ಕಲಾಂರನ್ನು ರಾಷ್ಟ್ರಪತಿಯಾಗಿ ನಾವು ಮಾಡಿದ್ದೇವೆ. ದಲಿತರಾದ ಕೋವಿಂದ್ ರನ್ನು ರಾಷ್ಟ್ರಪತಿ ಮಾಡಲಾಗಿದೆ. ಇದರ ಜೊತೆಗೆ ರಾಜ್ಯದಲ್ಲಿ ಗೋವಿಂದ್ ಕಾರಜೋಳರನ್ನು ಡಿಸಿಎಂ ಮಾಡಿದ್ದು, ಆನೇಕಲ್ ವಿಧಾನಸಭೆಯಲ್ಲಿ ಸೋತ ಎ.ನಾರಾಯಣಸ್ವಾಮಿಗೆ ಚಿತ್ರದುರ್ಗದಲ್ಲಿ ಸಂಸದರನ್ನಾಗಿಸಿ, ಮೊನ್ನೆ ಕೇಂದ್ರದಲ್ಲಿ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿಗೆ ‌ಮಂತ್ರಿ ಮಾಡಿದ್ದೇವೆ ಎಂದರು.

ಇನ್ನು ನನ್ನ ಹೆಸರಿನ ಫೇಕ್ ಆಡಿಯೋ ಪ್ರಕರಣ ತನಿಖೆ ನಡೆಯುತ್ತಿದೆ ಎಂದು ಕಟೀಲ್ ಹೇಳಿದರು. ಸಿದ್ಧರಾಮಯ್ಯ ಸರ್ಕಾರ ಮಾಡಿದಷ್ಟು ಭ್ರಷ್ಟಾಚಾರ ಯಾರು ಮಾಡಲು ಅಸಾಧ್ಯ, ಸಿದ್ಧರಾಮಣ್ಣ ಅರ್ಕಾವತಿ ಘಟನೆ ಮುಚ್ಚಿ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ನಮ್ಮಲ್ಲಿ ಮಿತ್ರ ಮಂಡಳಿ, ವಲಸಿಗ ಪದ ಸರಿಯಲ್ಲ, ಬಿಜೆಪಿಯಿಂದ ಶಾಸಕರಾಗಿದ್ದಾರೆ, ಪಕ್ಷದ ಒಂದು ಮಂಡಳಿ, ರಾಷ್ಟ್ರೀಯ ನಾಯಕರ ಸೂಚನೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.ಸಿಎಂ ಈಗಾಗಲೇ ನೆರೆ ವೀಕ್ಷಣೆ, ಪರಿಹಾರ ಕಾರ್ಯದಲ್ಲಿ ತೊಡಗಿದ್ದು,ಸಿಎಂ ಬದಲಾವಣೆ ಬಗ್ಗೆ ರಾಷ್ಟ್ರೀಯ ಅದ್ಯಕ್ಷರು ಗಮನಿಸಿ ಹೇಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

Reach Count: 
46005
Show Detail Screen Advertisement: 
Yes