Kshetra Samachara

Local News Subject: 
ಬ್ರಹ್ಮಾವರ: ಹಡಿಲು ಭೂಮಿ ಕೃಷಿ ನಾಟಿಗೆ ಕೈಜೋಡಿಸಿದ ಸಾಮಾಜಿಕ ಕ್ಷೇತ್ರದ ಗಣ್ಯರು
City: 
Udupi
Mangalore
Video Thumbnail: 
PublicNext-497088-552706-Udupi-Mangalore-Agriculture-node
Category: 
Agriculture
Body: 

ಉಡುಪಿ:"ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 25 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು ಇವತ್ತು ಚೇರ್ಕಾಡಿ ಗ್ರಾಮದ ಬಡಾಬೆಟ್ಟು ಬೈಲಿನ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಸಾಮಾಜಿಕ ಕ್ಷೇತ್ರದ ಗಣ್ಯರು ಗದ್ದೆಗಳಿದು ನಾಟಿ ಕಾರ್ಯದಲ್ಲಿ ಪಾಲ್ಗೊಂಡು ಚಾಲನೆ ನೀಡಿದರು.

ಕೆರಾಡಿ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು, ಧನಂಜಯ್ ಶೆಟ್ಟಿ ಆಡಳಿತ ಮೊಕ್ತೇಸರರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮಂದಾರ್ತಿ, ಗಣೇಶ್ ಕಿಣಿ ಉದ್ಯಮಿಗಳು, ಸದಸ್ಯರು ವ್ಯವಸ್ಥಾಪನ ಸಮಿತಿ ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ಭಟ್, ಉಪಾಧ್ಯಕ್ಷರಾದ ಕಿಟ್ಟಪ್ಪ ಅಮೀನ್, ಸದಸ್ಯರಾದ ಕಮಲಾಕ್ಷ್ ಹೆಬ್ಬಾರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ರಾಜ್ಯ ಬಿಜೆಪಿ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಪಕ್ಷದ ಮುಖಂಡರಾದ ಧನಂಜಯ್ ಅಮೀನ್, ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಹಾಗೂ ಚೇರ್ಕಾಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಭೂ ಮಾಲಕರು, ಸ್ಥಳೀಯ ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Reach Count: 
2334
Show Detail Screen Advertisement: 
Yes