Public News

News Subject: 
ರಾಜ್ಯದಲ್ಲಿ ನಿಧಾನವಾಗಿ ಕೊರೊನಾ ಏರಿಕೆ: 1,857 ಜನರಿಗೆ ಸೋಂಕು ದೃಢ
Upload Image: 
PublicNext-497315-553299-Health-and-Fitness-COVID-node
Category: 
Health & Fitness
COVID
Body: 

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಕಾಣುತ್ತಿದೆ. ಜುಲೈ ೨೨ರಂದು 1,653 ಜನರಿಗೆ, ಜುಲೈ ೨೩ರಂದು 1,705 ಮಂದಿಗೆ ಸೋಂಕು ದೃಢಪಟ್ಟಿತ್ತು. ಇಂದು ಕೂಡ ಏರಿಕೆ ಕಂಡಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,857 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 29 ಜನ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 2,050 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಈವರೆಗೂ 28,93,556 ಜನರಿಗೆ ಸೋಂಕು ತಗುಲಿದ್ದು, 36,352 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,33,276ಕ್ಕೆ ಏರಿಕೆಯಾಗಿದೆ. ಇನ್ನು 23,905 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಹರಡುವಿಕೆಯ ಪಾಸಿಟಿವಿಟಿ ದರ 1.21%ಕ್ಕೆ ಇಳಿಕೆಯಾಗಿದೆ. ಇನ್ನು ಮರಣ ಪ್ರಮಾಣ 1.56%ಕ್ಕೆ ಇಳಿಕೆಯಾಗಿದೆ. ರಾಜ್ಯಾದ್ಯಂತ 1,53,415 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 551 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,24,595ಕ್ಕೆ ಏರಿಕೆಯಾಗಿದೆ. 560 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,00,419ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 9 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,829 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 8,346 ಸಕ್ರಿಯ ಪ್ರಕರಣಗಳಿವೆ.

Reach Count: 
22655
Show Detail Screen Advertisement: 
Yes