Kshetra Samachara

Local News Subject: 
ಧಾರವಾಡ: ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಆರ್ಭಟ- 7 ಜನರಿಗೆ ಸೋಂಕು ದೃಢ
City: 
Hubballi-Dharwad
Upload Image: 
PublicNext--553272--node-nid
Category: 
Health & Fitness
COVID
Body: 

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಆರ್ಭಟ ತಗ್ಗಿದೆ. ನಿನ್ನೆ 6 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಇಂದು 7 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಕೊರೊನಾ ಆತಂಕ ಕೊಂಚ ಕಡಿಮೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಜಿಲ್ಲೆಯ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60,416ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 58,943ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಹೆಮ್ಮಾರಿಗೆ ಬಲಿಯಾಗಿದ್ದರೆ, ಈವರೆಗೂ ಒಟ್ಟು 1,276 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 196 ಸಕ್ರಿಯ ಪ್ರಕರಣಗಳಿವೆ.

Reach Count: 
19481
Show Detail Screen Advertisement: 
Yes