Public News

News Subject: 
ಅಂಗನವಾಡಿಯಲ್ಲಿ 96 ಹುದ್ದೆಗಳಿಗೆ ಅರ್ಜಿ ಆಹ್ವಾನ
Upload Image: 
PublicNext--617582--node-nid
Category: 
Jobs
Body: 

ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ 7 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆಯು ಮಹಿಳೆಯರಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ. ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಓದಿದ್ದು, ಕನ್ನಡ ಭಾಷೆ ಜ್ಞಾನ ಅವಶ್ಯವಾಗಿದೆ.

ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷವಯೋಮಿತಿ ನಿಗದಿಪಡಿಸಿದ್ದು, ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ನೀಡಲಾಗುವುದು.
ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರ, ಹೊಸದುರ್ಗ, ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ.

ಆದ್ಯತೆ: ವಿದ್ಯಾರ್ಹತೆ, ವಯೋಮಿತಿ, ಆ್ಯಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳಿಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.

ಗೌರವಧನ
ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000 ರೂ, ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.

ಅರ್ಜಿ ಸಲ್ಲಿಸಲು ಕೊನೇ ದಿನ: 16.10.2021
ಅಧಿಸೂಚನೆಗೆ: https://bit.ly/3i8EnfL
ಮಾಹಿತಿಗೆ: https://anganwadirecruit.kar.nic.in

Reach Count: 
27225
Show Detail Screen Advertisement: 
Yes